ಕೊಪ್ಪಳ: ಸದ್ಯ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಪ್ರಹ್ಲಾದ್ ಜೋಶಿ ಅವರು ಕೇಂದ್ರ ಸಚಿವರಾದ ಮೇಲಿಂದ ನಮಗೆ ಕಲ್ಲಿದ್ದಲು ಕೊರತೆ ಆಗಿಲ್ಲ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವಶ್ಯಕತೆಗೆ ಅನುಗುಣವಾಗಿ ಕಲ್ಲಿದ್ದಲು ತೆಗೆದುಕೊಳ್ಳುತ್ತೇವೆ. ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಆಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ನೋಡಿದ್ದೇನೆ. ಸದ್ಯ ಆರಂಭ ಇರುವ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಕೆಲವು ಸಣ್ಣ ಪುಟ್ಟ ಸಮಸ್ಯೆಗಳಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದು ಹಾಲಪ್ಪ ಆಚಾರ್ ಹೇಳಿದ್ದಾರೆ.
ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅವಶ್ಯವಿರುವೆಡೆಯಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದಿರುವ ಬಗ್ಗೆ ಮಾಹಿತಿ ಇದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
PublicNext
10/10/2021 02:26 pm