ಬೆಂಗಳೂರು: ಎಲ್ಲದರಲ್ಲೂ ರಾಜಕೀಯ ಮಾಡೋದು ಕಾಂಗ್ರೆಸ್ ನವರ ಗುಣ. ಹೀಗಾಗಿ ಅವರ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ವಿಚಾರವಾಗಿ ಕಾಂಗ್ರೆಸ್ ಹೇಳಿಕೆ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನವರ ಹೇಳಿಕೆ ನಮಗೆ ಮುಖ್ಯವಲ್ಲ ಎಂದಿದ್ದಾರೆ.
ಕಲ್ಲಿದ್ದಲು ಕೊರತೆ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಕೇಂದ್ರದೊಂದಿಗೆ ಮಾತನಾಡಿದ್ದೇನೆ. ರಾಜ್ಯಕ್ಕೆ ಹೆಚ್ಚು ಕಲ್ಲಿದ್ದಲು ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯಕ್ಕೆ ಕಲ್ಲಿದ್ದಲು ಒದಗಿಸಲೆಂದೇ ಪ್ರತ್ಯೇಕ ಗಣಿ ಆರಂಭಿಸಲಾಗಿದೆ. ಒರಿಸ್ಸಾದ ಮಾನಂದಿ, ಚಂದ್ರಾಪುರ ಫಾರೆಸ್ಟ್ ಎರಡು ಕಡೆ ಗಣಿ ಮಂಜೂರಾಗಿದೆ. ಇವೆರಡು ನಮ್ಮ ಪರವಾದರೆ ಕಲ್ಲಿದ್ದಲು ಸರಬರಾಜಿನಲ್ಲಿ ಯಾವುದೇ ಇಲ್ಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ
PublicNext
10/10/2021 02:54 pm