ಮೈಸೂರು: ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಹಿರಿಯ ನಾಯಕ ಎಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಗೆ ಕರೆಸಿಕೊಂಡು ಮಾತನಾಡಿದಾಗ ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದೇಳುವ ಧೈರ್ಯವನ್ನು ಸಿದ್ದರಾಮಯ್ಯ ಮಾಡಬೇಕಿತ್ತು" ಎಂದು ವ್ಯಂಗ್ಯವಾಡಿದರು.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ಸಿದ್ದರಾಮಯ್ಯ, ಕುಮಾರಸ್ವಾಮಿ ವಾಗ್ದಾಳಿ ನಡೆಸುತ್ತಿದ್ದರು. ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಇದರಲ್ಲೇನೋ ರಾಜಕೀಯ ವಾಸನೆ ಇದೆ. ವಿಜಯೇಂದ್ರ, ಯಡಿಯೂರಪ್ಪ ಹಣಿಯುವ ತಂತ್ರಗಾರಿಕೆ ನಡೆದಿದೆ ಎನ್ನುತ್ತಿರುವುದು ಬೂಟಾಟಿಕೆಯ ಹೇಳಿಕೆ. ನೀವಿಬ್ಬರೂ ಭ್ರಷ್ಟಾಚಾರದ ಪರವೋ? ವಿರುದ್ಧವೋ? ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದು ವಿಶ್ವನಾಥ್ ವಾಗ್ದಾಳಿ ನಡೆಸಿದರು.
PublicNext
11/10/2021 06:09 pm