ಬೆಂಗಳೂರು: "ಆಧುನಿಕ ಭಾರತೀಯ ಮಹಿಳೆಯರು ಈಗ ಸಾಮಾನ್ಯವಾಗಿ ಒಬ್ಬಂಟಿಯಾಗಿರಲು ಇಷ್ಟ ಪಡುತ್ತಾರೆ. ಮದುವೆಯಾದರೂ ಮಗುವಿಗೆ ಜನ್ಮ ನೀಡಲು ಇಚ್ಛಿಸಲ್ಲ" ಎಂಬ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, "ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂದುರುವ ಸಚಿವ ಕೆ.ಸುಧಾಕರ್ ಅವರೇ, ಮದುವೆಯಾದರೂ 'ಸಿಂಗಲ್' ಆಗಿರುವ ಮೋದಿಯವರ ಬಗ್ಗೆಯೂ ಹೀಗೆ ಹೇಳುವ ಧೈರ್ಯವಿದೆಯೇ? ಮಹಿಳೆಯರ ಬದುಕನ್ನು ನಿರ್ಧರಿಸುವ, ಆಯ್ಕೆಯನ್ನು ನಿಯಂತ್ರಿಸುವ, ಸ್ವತಂತ್ರ ಪ್ರಶ್ನಿಸುವ ಬಿಜೆಪಿಗೂ ತಾಲಿಬಾನ್‌ಗೂ ವ್ಯತ್ಯಾಸವಿಲ್ಲ" ಎಂದು ಕುಟುಕಿದೆ.
PublicNext
11/10/2021 10:21 pm