ಬೆಂಗಳೂರು: ಈಗಿನ ಮಹಿಳೆಯರು ಮದುವೆ ಆಗಲು ಹಾಗೂ ಮಕ್ಕಳನ್ನು ಪಡೆಯಲು ಇಚ್ಛಿಸುತ್ತಿಲ್ಲ. ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಬಯಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ತಮ್ಮ ಹೇಳಿಕೆ ಬಗ್ಗೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಒಂಟಿ ಜೀವನ ಬಯಸುವ ಮಹಿಳೆಯರನ್ನು ಪ್ರತ್ಯೇಕಿಸುವ ಉದ್ದೇಶವಿಲ್ಲ, ಅದು ಸರ್ವೆಯೊಂದನ್ನು ಆಧರಿಸಿದೆ. ಅದರಲ್ಲಿ ಯುವ ಜನರು ಯಾವ ರೀತಿಯ ಮನೋಭಾವ ಹೊಂದಿದ್ದಾರೆ ಎಂಬುದನ್ನು ಅಂಕಿಸಂಖ್ಯೆಗಳೊಂದಿಗೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ. ತಮ್ಮ ಹೇಳಿಕೆಯನ್ನು ಈ ರೀತಿಯಲ್ಲಿ ಅರ್ಥೈಸಿಕೊಂಡಿರುವುದು ದುರದೃಷ್ಟಕರವಾಗಿದೆ. ಹೆಣ್ಣು ಮಗಳ ತಂದೆಯಾಗಿ, ವೈದ್ಯನಾಗಿ ಮಹಿಳೆಯರಿಗೆ ಸಂಬಂಧಿಸಿದ ಸೂಕ್ಷ್ಮತೆ ಹಾಗೂ ಅವರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
PublicNext
12/10/2021 08:32 am