ಬೆಂಗಳೂರು: ಮಾಜಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡರನ್ನ ಒಂದೇ ಪಕ್ಷಕ್ಕೆ ತರುವಂತಹ ಪ್ರಯತ್ನ ಮಾಡುತ್ತೇನೆ ಎಂದು ಎಂಎಲ್ ಸಿ ಸಿ.ಎಂ. ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ. ಇಬ್ರಾಹಿಂ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಡಿ.ಕೆ.ಶಿವಕುಮಾರ್, ದೇವೇಗೌಡರನ್ನು ಒಂದೇ ಪಕ್ಷಕ್ಕೆ ತರುವಂತ ಪ್ರಯತ್ನ ಮಾಡುತ್ತೇನೆ. ಸಿದ್ದರಾಮಯ್ಯನವರ ಜೊತೆ ಈ ಹಿಂದೆಯೇ ಮಾತನಾಡಿದ್ದೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನಲ್ಲೂ ಅಲ್ಪ ಸಂಖ್ಯಾತರಿಗೆ ಸ್ಥಾನ ಮಾನವಿಲ್ಲ. ನಾನು ಈ ಬಗ್ಗೆ ಹಲವು ಬಾರಿ ಹೇಳಿದ್ದೇನೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರನಾ ದೆಹಲಿಗೆ ಹೊಗುವುದು. ಮುಸ್ಲಿಂನಲ್ಲಿ ಯಾರು ಸಹ ಲೀಡರ್ ಇಲ್ವಾ? ನಾನು ಯಾವುದೇ ರೀತಿಯ ಬ್ಲಾಕ್ಮೇಲ್ ಮಾಡಲ್ಲ ಎಂದು ಹೇಳಿದ್ದಾರೆ.
PublicNext
12/10/2021 01:21 pm