ಮೈಸೂರು: ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಸರ್ಕಾರವನ್ನೇ ತೆಗೆದ ಮಹಾನ್ ನಾಯಕ ಸಿದ್ದರಾಮಯ್ಯ. ನೀವು ನನ್ನ ಬಗ್ಗೆ ಮಾತನಾಡಬೇಡಿ. ಗೂಟದ ಕಾರಿಗಾಗಿ ನಿಮ್ಮ ಪಕ್ಷದ 23 ಶಾಸಕರನ್ನ ಬೀದಿಗೆ ತಂದವರು ನೀವು ಎಂದು ಜೆಡಿಎಸ್ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಸರ್ಕಾರ ಬರಲು ನಿಮ್ಮ ಪಾತ್ರ ಎಷ್ಟು ಅನ್ನೋದು ನನಗೆ ಗೊತ್ತಿದೆ. ಅಧಿಕಾರಕ್ಕಾಗಿ ನೀವು ಎಷ್ಟೆಟ್ಟು ಕುತಂತ್ರ ಮಾಡುತ್ತೀರಾ ಅನ್ನೋದು ನನಗೆ ಗೊತ್ತಿದೆ. ನಾನು ಯಾರನ್ನು ಬೇಕಾದರೂ ಚುನಾವಣೆಗೆ ನಿಲ್ಲಿಸ್ತೇನೆ, ಇವರು ಯಾವ ದೊಣ್ಣೆ ನಾಯಕ. ಇವರ ಇಂತ ಕೀಳು ರಾಜಕಾರಣವನ್ನ ಸರಿಪಡಿಸಬೇಕೆಂಬ ಉದ್ದೇಶದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದೇನೆ ಎಂದು ಕಿಡಿಕಾರಿದರು.
PublicNext
12/10/2021 05:11 pm