ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸತತ ಪ್ರಯತ್ನದಿಂದ ಶಾಂತಿಯ ಹೊಸ ಯುಗ ಆರಂಭವಾಗಿದೆ. ಇದರ ಪರಿಣಾಮ ಈಶಾನ್ಯ ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರದಲ್ಲಿ ಕಾನೂನು-ಸುವ್ಯವಸ್ಥೆಯ ಹೊಸ ಯುಗ ಶುರುವಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದರು.
ಎನ್‌ಎಚ್‌ಆರ್‌ಸಿಯ 28ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಶ್ರಾ ಅವರು ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ರೂಪಿಸಿದ್ದಕ್ಕಾಗಿ ಅದರ ಶ್ರೇಯಸ್ಸು ಜನರು ಮತ್ತು ನಾಯಕತ್ವಕ್ಕೆ ಸಲ್ಲಬೇಕು ಎಂದರು.
ನಾನು ಆತ್ಮೀಯವಾಗಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸುತ್ತೇನೆ. ನಿಮ್ಮ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು-ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ ಎಂದು ಅರುಣ್ ಮಿಶ್ರಾ ಹೇಳಿದ್ದಾರೆ.
PublicNext
13/10/2021 07:27 am