ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಪರ್ಸೆಂಟೇಜ್ ಪಡೆದಿದ್ದರು ಎಂಬ ಗುಸುಗುಸು ಮಾತಾಡಿದ ವಿಡಿಯೋ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಹಾಗೂ ಪಕ್ಷದಿಂದಲೂ ಅವರನ್ನು ವಜಾಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಸಲೀಂ ನಡುವೆ ಪಿಸುಮಾತಿನ ಮಾತುಕತೆ ನಡೆದಿತ್ತು. ಈ ವೇಳೆ ಅವರು ಡಿ.ಕೆ ಶಿವಕುಮಾರ್ ಸಚಿವರಾಗಿದ್ದಾಗ ಪರ್ಸೆಂಟೇಜ್ ಪಡೆಯುತ್ತಿದ್ದರು. ಅವರು ಕಲೆಕ್ಷನ್ ಗಿರಾಕಿ ಎಂದು ಮಾತಾಡಿಕೊಂಡಿದ್ದರು. ಇದರ ವಿಡಿಯೋ ಈಗ ಬಹಿರಂಗವಾಗಿದೆ.
PublicNext
13/10/2021 11:37 am