ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡಿಕೆಶಿ ಕುರಿತು ಸಲೀಂ ಸತ್ಯವನ್ನೇ ಹೇಳಿದ್ದಾರೆ

ಧಾರವಾಡ: ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ‌ ಸಮನ್ವಯಕಾರ ಸಲೀಂ ಹೇಳಿಕೆ ವಿಚಾರವಾಗಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಕುರಿತು ಸಲೀಂ ಅವರು ಸತ್ಯವನ್ನೇ ಹೇಳಿದ್ದಾರೆ. ಸತ್ಯವನ್ನು ಮುಚ್ಚಿಡೋಕೆ ಸಾಧ್ಯವಿಲ್ಲ. ಅದನ್ನು ಕಾಂಗ್ರೆಸ್‌ನವರೇ ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.

ಧಾರವಾಡದಲ್ಲಿ ಮಾತನಾಡಿರುವ ಅವರು, ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಅವರ ಪಕ್ಷದವರೇ ಮಾತನಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದು ಸೂಕ್ತವಲ್ಲ‌. ನಾನು ಬೇರೆ ಪಕ್ಷದಿಂದ ಮಂತ್ರಿಯಾದವನು. ಹೀಗಾಗಿ, ನಾನು ಮಾತನಾಡುವುದು ಸೂಕ್ತವಲ್ಲ. ಅವರ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ. ಏನು ನಡೆದಿದೆ ಅನ್ನೋದನ್ನು ಅವರ ಪಕ್ಷದವರೇ ಹೇಳಿದ್ದಾರೆ. ಜನ ಕೂಡ ಅವರ ಮಾತನ್ನು ಕೇಳಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

Edited By : Manjunath H D
PublicNext

PublicNext

13/10/2021 05:04 pm

Cinque Terre

49.36 K

Cinque Terre

2

ಸಂಬಂಧಿತ ಸುದ್ದಿ