ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಂದು ಕಾಲದಲ್ಲಿ ರಾಷ್ಟ್ರೀಯ ಪಕ್ಷ ಎಂದು ಕರೆಸಿಕೊಂಡಿದ್ದ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ : ವಿಜಯೇಂದ್ರ

ಚಿತ್ರದುರ್ಗ : ಒಂದು ಕಾಲದಲ್ಲಿ ರಾಷ್ಟ್ರೀಯ ಪಕ್ಷ ಎಂದು ಅನ್ನಿಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೆ. ವಿಜಯೇಂದ್ರ ತಿಳಿಸಿದರು.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ ಶ್ರೀ ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಕೆಲವು ರಾಜ್ಯಗಳಲ್ಲಿ ಅವಶೇಷಗಳ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಉಳಿದುಕೊಂಡಿದೆ ಎಂದು ಹೇಳಿದರು. ಇನ್ನೂ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಎರಡರಲ್ಲೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದಲ್ಲಿರುವ ಅಂತರೀಕ ಬೇಗುದಿ ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಮುಗಿಸೊಕೆ ಯಾವುದೇ ವಿರೋಧ ಪಕ್ಷ ಬೇಕಾಗಿಲ್ಲ, ಕಾಂಗ್ರೆಸ್ ಪಕ್ಷದಲ್ಲಿರುವ ಮುಖಂಡರೇ ಸಾಕು ಎಂದರು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಅವರೇ ಸಾಕು, ಬೇರೆ ಯಾವ ಪಕ್ಷ ಬೇಕಾಗಿಲ್ಲ. ಪಂಜಾಬಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಹೊಡೆದು ಮೂರು ಬಾಗಿಲಾಗಿದೆ. ಅದೇ ರೀತಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೊಡೆದು ಮೂರು ಬಾಗಿಲಾಗುತ್ತದೆ ಎಂದು ವಿಜಯೇಂದ್ರ ತಿಳಿಸಿದರು.

ಕಾಂಗ್ರೆಸ್ ಪಕ್ಷ ಉಪಚುನಾವಣೆ ನಾವೇ ಜಯಗಳಿಸೊದು ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಇತ್ತೀಚೆಗೆ ನಡೆದಂತಹ ಬೆಳಗಾವಿ, ಗುಲ್ಬರ್ಗಾ, ಹುಬ್ಬಳ್ಳಿ ಧಾರವಾಡ ಸ್ಥಳೀಯ ಚುನಾವಣೆಗಳಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಕೈ ಹಿಡಿದಿದ್ದಾರೆ ಎಂದರು.

ಒಂದೇ ವೇದಿಕೆಯಲ್ಲಿ ಡಿಕೆಶಿ ಹಾಗೂ ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತಿರುವ ಈ ವಿಚಾರವಾಗಿ ಸುದ್ದಿಗಾರರಿಗೆ ಉತ್ತರಿಸಿದ ಅವರು ಡಿಕೆಶಿ ಆತ್ಮೀಯ ಮಿತ್ರರು. ಅವರೊಂದಿಗೆ ಯಾವುದೇ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದನ್ನು ಚರ್ಚೆ ಮಾಡಿಲ್ಲ ಕೇವಲ ನಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಮಾತಾಡಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.

Edited By : Nagaraj Tulugeri
PublicNext

PublicNext

15/10/2021 08:36 am

Cinque Terre

42.55 K

Cinque Terre

2

ಸಂಬಂಧಿತ ಸುದ್ದಿ