ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್‌ಗೆ ಮಾತಲ್ಲೇ ಡಿಚ್ಚಿ ಕೊಟ್ಟ ಕುಮಾರಸ್ವಾಮಿ: ಮತ್ತೆ ಶುರುವಾದ ಸರಣಿ ಟ್ವೀಟ್ ಸಮರ

ಬೆಂಗಳೂರು: ಇಬ್ಬರು ಮಾಜಿ ಸಿಎಂಗಳ ನಡುವಿನ ಟ್ವೀಟ್ ವಾರ್ ಮತ್ತೆ ಶುರುವಾಗಿದೆ. ತಮ್ಮ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಗಳ ಬಗ್ಗೆ ಕುಮಾರಸ್ವಾಮಿ ಅವರು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದಿದ್ದಾರೆ. ಕುಮಾರಸ್ವಾಮಿ ಅವರು ಉಪಚುನಾವಣೆ ಹೊತ್ತಲ್ಲೇ ಈ ರೀತಿ ಟ್ವೀಟ್ ಮಾಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

'ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Edited By : Nagaraj Tulugeri
PublicNext

PublicNext

16/10/2021 12:33 pm

Cinque Terre

25.77 K

Cinque Terre

3

ಸಂಬಂಧಿತ ಸುದ್ದಿ