ಮೈಸೂರು: ನಾಳೆಯಿಂದ ನಾಲ್ಕು ದಿನಗಳ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರಡು ದಿನ ಹಾನಗಲ್ ಹಾಗೂ ಎರಡು ದಿನ ಸಿಂದಗಿಯಲ್ಲಿ ಪ್ರಚಾರ ಮಾಡುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ವಸ್ತು ಪ್ರದರ್ಶನವನ್ನ 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದ್ದೇವೆ. ಇದಕ್ಕೆ ಎಲ್ಲರ ಜೊತೆ ಕುಳಿತು ಮಾತುಕತೆ ನಡೆಸುತ್ತೇನೆ. ಈ ಸಲದ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ ಎಂದು ತಿಳಿಸಿದ್ದಾರೆ
PublicNext
16/10/2021 03:46 pm