ಧಾರವಾಡ: ನಾವು ಮುಸ್ಲಿಂ ವಿರೋಧಿಗಳಲ್ಲ. ನಮಗೆ ಯಾವ ಸಮುದಾಯದ ವಿರೋಧವೂ ಇಲ್ಲ. ಆದರೆ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಮುಸ್ಲಿಂ ಸಮುದಾಯದವರನ್ನು ಓಲೈಸುವುದಕ್ಕೋಸ್ಕರ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮತ ಪಡೆಯಲು ಇಬ್ಬರೂ ನಾಯಕರು ಈ ರೀತಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ ಎಂದರು.
ಜನಸಂಖ್ಯೆ ನಿಯಂತ್ರಣ ಸಂಬಂಧ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆ ಸತ್ಯವಾಗಿದೆ. ಈ ಸಂಬಂಧ ಎಲ್ಲ ಸರ್ಕಾರಗಳು ಚಿಂತನೆ ನಡೆಸಬೇಕು ಎಂದರು.
PublicNext
16/10/2021 05:37 pm