ರಾಯಚೂರು : ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಬಿಡಿ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದ ಮಾತು ಈಗ ಚರ್ಚೆಗೆ ಗ್ರಾಸವಾಗಿದೆ. ಇದೇ ಮಾತಿಗೆ ಸಿಡಿಮಿಡಿಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರ ಹೇಳಿಕೆ ಖಂಡನೀಯ ರಾಯಚೂರು ಕರ್ನಾಟಕದ ಭಾಗ. ಬಿಜೆಪಿಯವರಿಗೇನಾದರೂ ಅಖಂಡ ಕರ್ನಾಟಕದ ಬಗ್ಗೆ ನಂಬಿಕೆ ಇದ್ದರೆ ಕೂಡಲೇ ಶಿವರಾಜ್ ಪಾಟೀಲ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ. ಇಲ್ಲದಿದ್ದರೆ ಈ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಯಚೂರು ಭಾಗಕ್ಕೆ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಿಸಿದೆ. ಈಗ ಈ ಭಾಗ ಅಭಿವೃದ್ಧಿ ವಂಚಿತವಾಗಿದೆ ಎಂಬ ಶಿವರಾಜ್ ಪಾಟೀಲ್ ಹೇಳಿಕೆಯಿಂದಲೇ ಬಿಜೆಪಿ ಅಧಿಕಾರದ ವೈಖರಿ ಸ್ಪಷ್ಟವಾಗುತ್ತಿದೆ. ಬಿಜೆಪಿ ಸರ್ಕಾರವು ಜನಪರ ನಿಲುವು ತಾಳುವುದನ್ನು ಬಿಟ್ಟು ನಾಡು ಒಡೆಯುವ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.
PublicNext
16/10/2021 07:13 pm