ಹುಬ್ಬಳ್ಳಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲಿನ ವೈಯಕ್ತಿಕ ದ್ವೇಷ ಸಾಧನೆಗೆ, ಅಲ್ಪಸಂಖ್ಯಾತರನ್ನು ಏಕೆ ಬಳಸಿಕೊಳ್ಳುತ್ತಿದ್ದೀರಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಿರುದ್ಧ ವೈಯಕ್ತಿಕ ದ್ವೇಷವನ್ನು ಬೇರೆ ರೀತಿಯಲ್ಲಿ ಟೀಕೆ ಮಾಡಿ, ಆದರೆ ಅಲ್ಪಸಂಖ್ಯಾತರನ್ನು ಮುಂದುಟ್ಟುಕೊಂಡು ಸಮಾಜವನ್ನು ವಿಭಜಿಸುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದರು.
ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಜನರಿಗೆ ಅನುಕೂಲವಾಗುವಂತಹ ಯಾವ ಯೋಜನೆ ತಂದಿದ್ದಾರೆ? ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಎಲ್ಲ ರೀತಿಯ ಆಡಳಿತ ವೈಫಲ್ಯ ವಿರುದ್ಧ ಒಂದು ದಿನವು ಟೀಕೆ ಮಾಡದ ಕುಮಾರಸ್ವಾಮಿ, ಅವರು ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧವೇ ಮಾತನಾಡುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದರು. ಆಡಳಿತ ಪಕ್ಷ ಬಿಟ್ಟು ಪ್ರತಿಪಕ್ಷವು ಮತ್ತೊಂದು ಪ್ರತಿಪಕ್ಷವನ್ನೇ ಟೀಕೆ ಮಾಡುತ್ತಿರುವುದು ನೋಡಿದರೆ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಒಪ್ಪಂದ ಮಾಡಿಕೊಂಡಿದೀರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದರು.
PublicNext
17/10/2021 01:02 pm