ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ಓರ್ವ ಹೆಬ್ಬೆಟ್ಟು ಗಿರಾಕಿ ಕನಸು ಕಾಣುತ್ತಿದ್ದಾನೆ; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್

ಬೆಂಗಳೂರು: ಕೊರೊನಾ ಓಡಿಸಿ ಅಂದ್ರೆ ಪ್ರಧಾನಿ ಮೋದಿ ಜಾಗಟೆ ಬಾರಿಸಿ, ಚಪ್ಪಾಳೆ ತಟ್ಟಿ ಅಂದರು. ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರಿಂದ ಕೆರಳಿದ ಕರ್ನಾಟಕ ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದೆ.

ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಸಿಎಂ ಸಾಂವಿಧಾನಿಕ ಹುದ್ದೆ ಬಗ್ಗೆ ಮಾತಾಡಿದ್ದರು. ಆ ಪದಗಳನ್ನು ನೀವು ಹೇಗೆ ಅರಗಿಸಿಕೊಂಡ್ರಿ ಬುರುಡೆರಾಮಯ್ಯ ಅಂತ ಹ್ಯಾಶ್ ಟ್ಯಾಗ್ ಹಾಕಿ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಜನರಿಂದ ಎರಡನೇ ಭಾರಿ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಅಂತ ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಗುಡುಗಿದೆ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ‘ಹೆಬ್ಬೆಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು? ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕೇಳಿದೆ.

Edited By : Vijay Kumar
PublicNext

PublicNext

17/10/2021 03:02 pm

Cinque Terre

31.22 K

Cinque Terre

6

ಸಂಬಂಧಿತ ಸುದ್ದಿ