ಮುಂಬೈ: ಬೃಹತ್ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವ ಕೇಂದ್ರ ಸರ್ಕಾರ ದೇಶದ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು ಕಾನೂನಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವವರು ಅಧಿಕಾರದಲ್ಲಿ ಇರಬಾರದು ಎಂದು ಅವರು ಹೇಳಿದ್ದಾರೆ.
PublicNext
18/10/2021 07:51 am