ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿ.ಎಚ್‌.ಪಿ ತ್ರಿಶೂಲ ಬಳಸಿದ್ದು ಇದೇ ಮೊದಲೇನಲ್ಲ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿವೆ. ಮುಸ್ಲಿಮರನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಆರ್‌ಎಸ್‌ಎಸ್‌ ವಿರೋಧಿ ಹಾಗೂ ಮುಸ್ಲಿಮರ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿದ್ದನ್ನು ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಅವರು ಆರ್ಎಸ್‌ಎಸ್ ಬಗ್ಗೆ ಮಾತಾಡಿದರೆ ಅಲ್ಪಸಂಖ್ಯಾತರ ಮತ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಆರ್‌ಎಸ್‌ಎಸ್ ಮತ್ತು ವಿಎಚ್‍ಪಿ ತ್ರಿಶೂಲ ಬಳಕೆ ಇದೇ ಮೊದಲೇನಲ್ಲ. ಅದು ಪ್ರತಿವರ್ಷ ನಡೆಯುವ ಕಾರ್ಯಕ್ರಮ ಎಂದು ಸ್ಪಷ್ಟ ಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

18/10/2021 08:12 am

Cinque Terre

50.58 K

Cinque Terre

6