ಹುಬ್ಬಳ್ಳಿ: ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾದ ಆರ್ಥಿಕ ನೀತಿ ಇಲ್ಲ, ಹಾಗೂ ಜನಪರ ಕಾಳಜಿ ಇಲ್ಲದೆ ತೆರಿಗೆ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಪಬ್ಲಿಕ್ ನೆಕ್ಸ್ಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ನಗರದಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬೆಲೆ ಏರಿಕೆ ತಡೆಗಟ್ಟಬೇಕಾದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ ಎಂದರು. ಮತ್ತೆ ಬಿಜೆಪಿ ಗೆಲ್ಲಿಸಿದ್ದೆ ಆದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆ ಮತ್ತಷ್ಟು ಹೆಚ್ಚಾಗಲಿದೆ ಎಂದರು.
ಈ ಬಾರಿ ಮತದಾರರನ್ನು ಭಾವನಾತ್ಮಕವಾಗಿ ಕಟ್ಟಿ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ತೈಲ ಬೆಲೆ ಏರಿಕೆ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜನಸಾಮಾನ್ಯರ ಕಷ್ಟ ಪರಿಹರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಜನ ಸಾಮಾನ್ಯರಿಗೆ ನ್ಯಾಯ ಬೇಕಾದರೆ ಪ್ರತಿಪಕ್ಷಗಳು ಪ್ರತಿಭಟನೆ ಮಾಡಬೇಕು ಎಂಬ ಭಾವನೆ ಸರಿಯಲ್ಲ ಎಂದು ತಿಳಿಸಿದರು.
PublicNext
18/10/2021 10:07 am