ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಚರ್ಚ್ ಮೇಲೆ ದಾಳಿ ಇದು ಆರ್ ಎಸ್ ಎಸ್ ಪಿತೂರಿ : ಡಿಕೆಶಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬೈರಿದೇವರಕೊಪ್ಪದ ಚರ್ಚ್ ನಲ್ಲಿ ಹಿಂದೂಗಳನ್ನು ಮತಾಂತರ ಮಾಡುತ್ತಿದ್ದಾರೆಂದು ಭಜರಂಗದಳದ ಕಾರ್ಯಕರ್ತರು ಚರ್ಚ್ ಗೆ ದಾಳಿ ಮಾಡಿದ್ದರು. ಇದರಿಂದ ಹಿಂದೂ ಸಂಘಟನೆ ಮತ್ತು ಕ್ರೈಸ್ತರ ನಡುವೆ ವಾಗ್ವಾದ ನಡೆದಿತ್ತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದು ಆರ್ ಎಸ್ ಎಸ್ ಕಾರ್ಯಕರ್ತರು ಮಾಡಿರುವ ದಾಳಿ ಬಿಜೆಪಿಯ ಕೋಮುವಾದಿ ಮನಃಸ್ಥಿತಿಗೆ ಹಿಡಿದ ಕೈಗನ್ನಡಿ.

ದೇಶದ ಜನರ ಧಾರ್ಮಿಕ ಹಕ್ಕುಗಳಿಗೆ ಚ್ಯುತಿ ಬರುವಂತೆ ನಡೆಯುತ್ತಿರುವ ಘಟನೆಗಳನ್ನು ನೋಡಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

18/10/2021 03:42 pm

Cinque Terre

87.82 K

Cinque Terre

45

ಸಂಬಂಧಿತ ಸುದ್ದಿ