ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು : ಮಾಜಿ ಸಿಎಂ ಬಿಎಸ್ವೈ ಹೇಳಿಕೆ

ಚಿತ್ರದುರ್ಗ : ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪಚುನಾವಣೆಯ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಕ್ಷೇತ್ರಗಳಲ್ಲಿ ಬಹಳ ಅಂತರದಿಂದ ಗೆಲ್ಲಬೇಕು ಅನ್ನುವ ಇಚ್ಛೆ ಇದೆ ಎಂದು ತಿಳಿಸಿದರು. ಪ್ರಧಾನಿ ಮೋದಿ ಅವರನ್ನು ರಾಷ್ಟ್ರ ನಾಯಕ ಎಂದು ದೇಶದ ಜನರು ಒಪ್ಪಿದ್ದಾರೆ ಆದರೆ ಕಾಂಗ್ರೆಸ್ ಪಕ್ಷದವರು ಮೋದಿ ಅವರನ್ನು ಹೆಬ್ಬೆಟ್ಟಿನ ಗಿರಾಕಿ ಎಂದು ಹೇಳುವುದು ಸರಿಯಲ್ಲ ಎಂದರು. ಇನ್ನೂ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿದೆ, ಉಪಚುನಾವಣೆ ಮುಗಿದ ನಂತರ ಕಡಿಮೆ ಮಾಡಲು ಸಿಎಂ ಗೆ ತಿಳಿಸುತ್ತೇನೆ ಎಂದು ಹೇಳಿದರು.

ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಏಳೆಂಟು ಬಾರಿ ಗೆದ್ದಿದ್ದಾರೆ ಹಿರಿಯ ಶಾಸಕರಿದ್ದರು ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ,ನಮ್ಮಿಂದ ತಪ್ಪಾಗಿದೆ, ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದರು.

Edited By : Manjunath H D
PublicNext

PublicNext

18/10/2021 06:34 pm

Cinque Terre

40.93 K

Cinque Terre

1

ಸಂಬಂಧಿತ ಸುದ್ದಿ