ಕಲಬುರಗಿ: ಬೆಲೆ ಏರಿಕೆಯನ್ನು ವಿರೋಧ ಪಕ್ಷಗಳು ಟೀಕೆ ಮಾಡಿದ್ರೆ, ವಿರೋಧ ಪಕ್ಷ ಬರೀ ಮಾಡುತ್ತೆ ಎಂದು ವಾದಿಸುತ್ತಾರೆ. ಪೆಟ್ರೋಲ್-ಡೀಸೆಲ್ ಬೆಲೆ ನೂರು ಆಗಲಿ ಪರವಾಗಿಲ್ಲ ಎನ್ನುವ ವಿಕೃತ ಮನಸಿನವರಿದ್ದಾರೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ 60 ರೂಪಾಯಿ ಲೀಟರ್ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದರೂ ಯಾರೂ ಅದನ್ನು ಪ್ರಶ್ನೆ ಮಾಡುತ್ತಿಲ್ಲ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಿಲ್ಲ. ಬೆಲೆ ನೂರರ ಗಡಿ ದಾಟಿದ್ದು ದುರದೃಷ್ಟಕರ ಎಂದ ಖರ್ಗೆ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು.
ಇದೇ ವೇಳೆ ಉಪಚುನಾವಣೆ ಕುರಿತಾಗಿ ಮಾತನಾಡಿದ ಖರ್ಗೆ, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಇದೆ ಮೊದಲ ಬಾರಿಗೆ ಎರಡು ಕಡೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ಕಾಂಗ್ರೆಸ್‌ಗೆ ಹಿನ್ನಡೆ ಅಂತ ತಿಳ್ಕೊಂಡ್ರೆ ಅದು ತಪ್ಪು ಕಲ್ಪನೆ. ಜನ ಈಗ ಜಾಗೃತರಾಗಿದ್ದಾರೆ ಜಾತ್ಯಾತೀತ ತತ್ವದ ಮೇಲೆ ಕಾಂಗ್ರೆಸ್ ನಡೆಯುತ್ತಿದೆ. ಹಾಗಾಗಿ ಈ ಎರಡು ಕ್ಷೇತ್ರಕ್ಕೆ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡ್ತಾರೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
PublicNext
18/10/2021 07:21 pm