ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಟ್ವಿಟ್ಟರ್ ವಾರ್ ಮುಂದುವರೆದಿದೆ. ಒಬ್ಬರ ಕಾಲು ಒಬ್ಬರು ಎಳೆಯುತ್ತಿರುವ ಎರಡು ಪ್ರತಿಷ್ಠಿತ ಪಕ್ಷಗಳು ಜನಸಾಮಾನ್ಯರ ಮುಂದೆ ನಗೆಪಾಟಲಿಗೀಡಾಗುತ್ತಿವೆ ಎನ್ನುವುದನ್ನು ಮರೆತಿವೆ. ಹೌದು ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ನಲ್ಲಿ ಹೆಬ್ಬೆಟ್ಟು ಮೋದಿ ಎಂದ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ಕೊಟ್ಟಿದೆ.
ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು. ಆದ್ರೆ, 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವ ನಾಯಕ ಭಾರತದಲ್ಲಿ ಓದಲೇ ಇಲ್ಲ. ವಯಸ್ಕರ ಶಿಕ್ಷಣ ಯೋಜನೆಗಳಿದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೇ ಇಲ್ಲ ಎಂದು ಬಿಜೆಪಿ ರಾಹುಲ್ ಗಾಂಧಿ ಹೆಸರು ಎತ್ತದೇ ಪರೋಕ್ಷ ತಿರುಗೇಟು ಕೊಟ್ಟಿದೆ.
PublicNext
18/10/2021 10:09 pm