ತುಮಕೂರು: ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಇದೇ ಟ್ವೀಟ್ ವಿಚಾರವಾಗಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್, ತಮ್ಮದೇ ಪಕ್ಷದ ನಾಯಕ ಕುಮಾರಸ್ವಾಮಿ ಅವರ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಸಿದ್ದರಾಮಯ್ಯರಿಗೆ ಹೇಳುವ ಮೊದಲು ನಾವೆಷ್ಟು ಪ್ರಾತಿನಿಧ್ಯ ನೀಡಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಬದ್ಧತೆ ಬಗ್ಗೆ ನಮ್ಮ ಆತ್ಮವಿಮರ್ಶೆಯನ್ನು ನಾವು ಮಾಡಿಕೊಳ್ಳಬೇಕು. ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಅಲ್ಪ ಸಂಖ್ಯಾತ ಅಭ್ಯರ್ಥಿಯನ್ನು ಕಣಕಿಳಿಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
PublicNext
19/10/2021 08:01 am