ವಿಜಯಪುರ: ನನ್ನ ಬದುಕಿನ ಕೊನೆ ಘಟ್ಟದಲ್ಲಿದ್ದೇನೆ. ಇನ್ನು ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ. ಹೀಗಾಗಿ ನನಗೆ ಮತ ಭಿಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ದೇವೇಗೌಡ ಮತದಾರರಲ್ಲಿ ಅಂಗಲಾಚಿಕೊಂಡಿದ್ದಾರೆ.
ಜೆಡಿಎಸ್ ಶಾಸಕ ಎಂ.ಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ವಿಧಾನ ಸಭಾ ಕ್ಷೇತ್ರಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ. ಕ್ಷೇತ್ರದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ದೇವೇಗೌಡರು ಭಾವನಾತ್ಮಕವಾಗಿ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ್ದಾರೆ. ಸೋಮವಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ದೇವೇಗೌಡ, ನನಗೆ ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನಾನು ನೋಡಬೇಕು. ಇದಕ್ಕಾಗಿ ಮತ ಭಿಕ್ಷೆ ಕೇಳುತ್ತಿದ್ದೇನೆ. ದಯವಿಟ್ಟು ಜೆಡಿಎಸ್‌ಗೆ ಮತ ಹಾಕಿ ಎಂದು ಮನವಿ ಮಾಡಿದ್ದಾರೆ.
PublicNext
19/10/2021 11:56 am