ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಬೊಮ್ಮಾಯಿ ಸರ್ಕಾರದಲ್ಲಿ ಕಾಲಿನಿಂದ ತಲೆವರೆಗೆ ಭ್ರಷ್ಟಾಚಾರ ಇದೆ: ರಣದೀಪ್‌ಸಿಂಗ್ ಸುರ್ಜೇವಾಲಾ

ಕಲಬುರಗಿ: ಬೊಮ್ಮಾಯಿ ಸರ್ಕಾರದಲ್ಲಿ ಕಾಲಿನಿಂದ ತಲೆವರೆಗೆ ಭ್ರಷ್ಟಾಚಾರ ಇದೆ. ತೈಲ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದ್ರೆ ಇವರು ಜನರನ್ನ ಹೇಗೆ ಲೂಟಿ ಮಾಡುತ್ತಿದ್ದಾರೆಂಬುದು ತಿಳಿಯುತ್ತೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಕಲಬುರಗಿ ಏರ್‌ಪೋಟ್೯ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬದಲಾವಣೆ ಗಾಳಿ ಇದೆ. ಬೊಮ್ಮಾಯಿ‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಲಿನಿಂದ ತಲೆ ವರೆಗೂ ಬೊಮ್ಮಾಯಿ‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮೋದಿ, ಬೊಮ್ಮಾಯಿ‌ ಸರ್ಕಾರ ಜನರನ್ನ ಬೆಲೆ ಏರಿಕೆಯಿಂದ ಲೂಟಿ ಮಾಡುತ್ತಿದೆ. ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು ಮೋದಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಮಾಡಿಲ್ಲ. ಆದ್ರೆ ನಾವು ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

Edited By : Manjunath H D
PublicNext

PublicNext

19/10/2021 01:17 pm

Cinque Terre

74.35 K

Cinque Terre

17

ಸಂಬಂಧಿತ ಸುದ್ದಿ