ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್: ನಳಿನ್‌ಕುಮಾರ್ ಕಟೀಲ್

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ತಮ್ಮ ಪಕ್ಷವನ್ನೇ ಸಂಭಾಳಿಸಲು ಆಗುತ್ತಿಲ್ಲ. ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್. ಇದನ್ನು ನಾನು ಹೇಳ್ತಾ ಇಲ್ಲ. ಮಾಧ್ಯಮಗಳೇ ಹೇಳುತ್ತಿವೆ. ಇಂತವರು ನಮ್ಮ ಪ್ರಧಾನಿ ಬಗ್ಗೆ ಟೀಕೆ ಮಾಡ್ತಾರೆ. ಕಾಂಗ್ರೆಸ್ ನವರು ಪಕ್ಷ ಕಟ್ಟಲು ವಿಲವಿಲ ಒದ್ದಾಡುತ್ತಿದ್ದಾರೆ. ಇಂತವರು ನಮ್ಮ ಪ್ರಧಾನಿ ಬಗ್ಗೆ ಹೆಬ್ಬೆಟ್ಟು ಅಂತಾ ಟೀಕೆ ಮಾಡ್ತಾರೆ.

ನಮ್ಮ ಪ್ರಧಾನಿ 7 ವರ್ಷದ ಆಡಳಿತದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಪಾಕಿಸ್ತಾನ ಹಾಗೂ ಚೀನಾಗೆ ಆಗಾಗ ತಕ್ಕ ಉತ್ತರ ನೀಡಿದ್ದಾರೆ. ಜಗತ್ತಿನಲ್ಲಿ ಗೌರವ ಸಿಗುವ ದೇಶ ಭಾರತ. ಅಲ್ಲದೇ ದೇಶದ ಪ್ರಧಾನ ಮಂತ್ರಿಗೆ ಬೇರೆ ದೇಶಗಳು ಗೌರವ ಕೊಡುತ್ತಿವೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ ಎಂದರು.

Edited By : Manjunath H D
PublicNext

PublicNext

19/10/2021 01:54 pm

Cinque Terre

57.25 K

Cinque Terre

28

ಸಂಬಂಧಿತ ಸುದ್ದಿ