ಹುಬ್ಬಳ್ಳಿ: ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದರೆ, ಸಿದ್ದರಾಮಯ್ಯ ಸಾಬ್ ಕಾ ಸಾಥ್, ಸಾಬ್ ಕಾ ವಿಕಾಸ್ ಅಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಸ್ಲಿಂ ಓಲೈಕೆ ಮಾಡುತ್ತಾರೆ. ಉಗ್ರಪ್ಪನವರು ಜೀವಮಾನದಲ್ಲಿಯೇ ಪಿಸುಮಾತಿನಲ್ಲಿ ಹೀಗೆ ಮಾತನಾಡಿರಲಿಲ್ಲ. ಸಿದ್ದರಾಮಯ್ಯ ಮಾತಾನಾಡಿದ್ದರಿಂದ ಉಗ್ರಪ್ಪ ಮಾತನಾಡಿದ್ದಾರೆ. ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ 29 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕರಿಸಬೇಕಿದೆ. ಎಲ್ಲ ಕ್ಷೇತ್ರಗಳಲ್ಲಿ ಈ ದೃಷ್ಟಿಯಿಂದ ನಮ್ಮ ಕಾರ್ಯಕ್ರಮಗಳು ನಡೆದಿವೆ.ಹೊಸ ಮತದಾರರ ಪಟ್ಟಿ, ಹೊಸ ಮತದಾರರ ಸೇರ್ಪಡೆ ಆಗಬೇಕಿದೆ.ಎಲ್ಲ ಕಡೆಯಲ್ಲಿ ಈ ಪ್ರಕ್ರಿಯೆ ನಡೆದಿದೆ ಎಂದರು.
ಜೆಡಿಎಸ್ ಕುಂಟುಂಬ ರಾಜಕೀಯ ಮಾಡುತ್ತ ಹಾಳಾಗಿದೆ...
ರಾಜ್ಯದಲ್ಲಿ ಜೆ.ಡಿಎಸ್, ಕಾಂಗ್ರೆಸ್ ಚಿಲ್ಲರೆ ರಾಜಕೀಯಕ್ಕೆ ಇಳಿದಿದ್ದಾರೆ. ಅವರಿಗೆ ಬಹುಸಂಖ್ಯಾತರ ವೋಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಹೀಗಾಗಿ ಆರ್.ಎಸ್. ಎಸ್ ಗೆ ಬೈಯುವ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಕುಂಟುಂಬ ರಾಜಕೀಯ ಮಾಡುತ್ತ ಹಾಳಾಗಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಆಡಳಿತ ಜನರಿಗೆ ಮೆಚ್ಚುಗೆ ಸಿಕ್ಕಿದೆ. ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ ಎಂದರು.
PublicNext
19/10/2021 02:09 pm