ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಪ್ರತಿಯೊಬ್ಬ ಜನಪ್ರತಿನಿಧಿಯು ಮೌಲ್ಯಾಧಾರಿತ ರಾಜಕಾರಣ ಮಾಡಬೇಕಾಗಿದೆ : ಬಸವರಾಜ ಹೊರಟ್ಟಿ

ಧಾರವಾಡ : ರಾಜಕೀಯ ಜೀವನದಲ್ಲಿ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ಟೀಕೆ ಟಿಪ್ಪಣಿಗಳನ್ನು ಮಾಡಬಾರದು. ಅದೂ ಸರಿಯಲ್ಲ. ರಾಜ್ಯದಲ್ಲಿರುವ ಮೂರು ರಾಜಕೀಯ ಪಕ್ಷದವರು ಪರಸ್ಪರ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡಬಾರದು. ಇನ್ನೊಬ್ಬರಿಗೆ ಮಾದರಿಯಾಗುವ ರೀತಿಯಲ್ಲಿ ಜನಪ್ರತಿನಿಧಿಗಳು ನಡೆದುಕೊಳ್ಳಬೇಕು. ಮೌಲ್ಯಾಧಾರಿತ ರಾಜಕಾರಣ ಮಾಡಬೇಕಾದುದ್ದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ರಾಜಕೀಯದಲ್ಲಿ ಇದ್ದೇನೆ. ಅಂದಿನಿಂದಲೂ ಮೌಲ್ಯಾಧಾರಿತ ರಾಜಕೀಯಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದ್ದೇನೆ. ಈಗ ನಾನು ಹೋಗುವಾಗ ಮಾಸ್ಕ್ ಹಾಕಿಕೊಳ್ಳದಿದ್ದರೆ, ಇವರೇ ಮಾಸ್ಕ್ ಹಾಕಿಕೊಳ್ಳಲ್ಲ ನಮಗೆ ಬುದ್ದಿ ಹೇಳ್ತಾರೆ ಎಂದು ಆಡಿಕೊಳ್ಳುತ್ತಾರೆ. ಹಾಗಾಗಿ ನಾವು ಜನಪ್ರತಿನಿಧಿಗಳಾದವರು ಇನ್ನೊಬ್ಬರಿಗೆ ಮಾದರಿ ಆಗುವ ಹಾಗೇ ನಡೆದುಕೊಳ್ಳಬೇಕು ಎಂದರು.‌

ಇವತ್ತಿನ ರಾಜಕಾರಣದಲ್ಲಿ ವ್ಯವಸ್ಥೆ ಸರಿ ಇಲ್ಲ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದನ್ನು ಸರಿ ಮಾಡಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸರ್ಕಾರದಲ್ಲಿ ಒಬ್ಬರು ಮಂತ್ರಿಯಾಗಿರುವವರು ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು. ಒಬ್ಬ ಸಾಮಾನ್ಯ ವ್ಯಕ್ತಿ ಮಾತನಾಡುವುದಕ್ಕೂ, ಒಬ್ಬ ಮಂತ್ರಿ ಮಾತನಾಡುವುದಕ್ಕೂ ತುಂಬಾ ವ್ಯತ್ಯಾಸ ಇರುತ್ತದೆ. ಹೀಗಾಗಿ ಎಲ್ಲರೂ ನೋಡಿಕೊಂಡು ತಮ್ಮ ಹೇಳಿಕೆಗಳನ್ನು ನೀಡಬೇಕಾಗಿದೆ ಎಂದು‌ ಪರಸ್ಪರ ಟೀಕೆ ಮಾಡುತ್ತಿರುವ ರಾಜಕಾರಿಣಿಗಳಿಗೆ ಕಿವಿ ಮಾತು ಹೇಳಿದರು.

Edited By : Manjunath H D
PublicNext

PublicNext

20/10/2021 05:36 pm

Cinque Terre

70.86 K

Cinque Terre

3

ಸಂಬಂಧಿತ ಸುದ್ದಿ