ಬೆಂಗಳೂರು: ನೆರೆ ರಾಜ್ಯ ದೇವರ ನಾಡು ಕೇರಳ ಈಗ ಜಲಪ್ರಳಯಕ್ಕೆ ತತ್ತರಿಸಿದೆ.ಜನ ಜೀವನವೂ ಹದಗೆಟ್ಟು ಹೋಗಿದೆ.ಈ ಪರಿಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆರವಾಗಲು ಮುಂದಾಗಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೂ ಫೋನ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ಜಲಪ್ರಳಯ ಹಾಗೂ ಭೂಕುಸಿತದಿಂದ ಆದ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಹಾರದ ಕಾರ್ಯಾಚರಣೆ ನೆರವಾಗುವುದಾಗಿ ಭರವಸೆ ನೀಡಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಕಾರ್ಯದರ್ಶಿಗಳೊಂದಿಗೆ ಸಂಪರ್ಕದಲ್ಲಿ ಇರುವಂತೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳ ಕಾರ್ಯದರ್ಶಿಗೂ ತಿಳಿಸಿದ್ದಾರೆ ಸಿಎಂ.
PublicNext
20/10/2021 07:53 pm