ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ಅವರಿಂದ ಇಷ್ಟೆಲ್ಲಾ ಕಡಿಮೆ ಅವದಿಯಲ್ಲಿ ಲಸಿಕೆಯನ್ನು ಪೂರೈಸಿದ್ದು- ಡಾ. ಸುಧಾಕರ

ಹುಬ್ಬಳ್ಳಿ- ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ವೈದ್ಯರು, ದಾದಿಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಇದಕ್ಕಾಗಿ ಕಳೆದ ಒಂದೂವರೆ ವರ್ಷದಿಂದ ಹಗಲಿರುಳು ಶ್ರಮಿಸಿದ್ದಾರೆ, ರಾಜ್ಯದ ಜನತೆ ಸಹಕಾರ ನೀಡಿದ್ದಾರೆ ಎಂದು ಆರೋಗ್ಯ ,ಕುಟುಂಬ ಕಲ್ಯಾಣ ಹಾಗೂ ವೈದ್ಯ ಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ ಹೇಳಿದರು.

ನಗರದಲ್ಲಿ ಕಿಮ್ಸ್ ಆಸ್ಪತ್ರೆಯಲ್ಲಿ ಲಸಿಕಾ ಸಂಭ್ರಮದಲ್ಲಿ ಮಾತನಾಡಿದ ಅವರು, ಅತಿಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಗಡಿ,ಬೆಟ್ಟ,ಗುಡ್ಡ,ನದಿ,ಸರೋವರಗಳನ್ನು ದಾಟಿ ಲಸಿಕೆಗಳನ್ನು ನೀಡಿದ ಉದಾಹರಣೆಗಳಿವೆ.ಚೀನಾದ ನಂತರ ಅತಿಹೆಚ್ಚು ಲಸಿಕೆ ನೀಡಿದ ದೇಶ ಭಾರತವಾಗಿದೆ. ಮಕ್ಕಳಿಗೆ ನೀಡುತ್ತಿರುವ ಲಸಿಕೆಗಳ ಜೊತೆಗೆ ನ್ಯುಮೋನಿಯಾ ತಡೆಯಲು ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ನೀಡಿಕೆಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಚಾಲನೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.ಮಕ್ಕಳು ದೇಶದ ಹಾಗೂ ಸಮಾಜದ ಆಸ್ತಿ ,ಅವರ ಆರೋಗ್ಯ ಸುರಕ್ಷತೆಗೆ ಈ ಲಸಿಕೆ ಪೂರಕವಾಗಲಿದೆ. ಮಗುವಿನ ಒಂದೂವರೆ,ಮೂರುವರೆ ಹಾಗೂ ಒಂಬತ್ತನೇ ತಿಂಗಳ ವಯಸ್ಸಿನಲ್ಲಿ ಈ ಲಸಿಕೆ ಹಾಕಿಸಬೇಕು ಎಂದರು.

Edited By : Nagesh Gaonkar
PublicNext

PublicNext

22/10/2021 02:41 pm

Cinque Terre

33.94 K

Cinque Terre

2

ಸಂಬಂಧಿತ ಸುದ್ದಿ