ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಕರೆದ ಮೇಲೆ ಟೀಕೆಗಳು ಹೆಚ್ಚಾಗಿವೆ. ಬೈ ಎಲೆಕ್ಷನ್ ಭರಾಟೆಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಸಹ ವೈಯಕ್ತಿಕ ತೇಜೋವಧೆಗೆ ಮುಂದಾಗಿದ್ದಾರೆ.
ಸದ್ಯ ಸಾಗರದ ಮಾಜಿ ಶಾಸಕ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲ ಕೃಷ್ಣ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸೀರೆ ಉಡಿಸಿದರೆ ಅವರು ಗಂಡೂ ಅಲ್ಲ ಹೆಣ್ಣು ಅಲ್ಲ ಎನ್ನುವಂತಿದ್ದಾರೆ. ಒಂದು ವೇಳೆ ಸೀರೆ ಉಡಿಸಿದರೆ ಹೆಣ್ಣೋ ಗಂಡೋ ಎಂದು ಪರೀಕ್ಷೆ ಮಾಡಬೇಕಾಗುತ್ತೆ ಎಂದು ಲೇವಡಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ನಾಯಕರ ವಿರುದ್ಧ ನಳೀನ್ ಕುಮಾರ್ ಕಟೀಲ್ ಟೀಕೆ ಮಾಡುತ್ತಿರುವುದಕ್ಕೆ ಪ್ರತ್ಯುತ್ತರ ನೀಡಿದ್ದಾರೆ. ಕಾಂಗ್ರೆಸ್ ಬಗ್ಗೆ ಮಾತನಾಡಲು ಕಟೀಲ್ಗೆ ಯಾವುದೇ ನೈತಿಕತೆ ಇಲ್ಲ , ಅವರದ್ದೇ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ನೀಲಿಚಿತ್ರ ನೋಡಿದ್ದರು ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಅವರ ಪಕ್ಷದಲ್ಲಿ ಅತ್ಯಾಚಾರಿಗಳು ಇದ್ದಾರೆ. ಹಲವು ಹಗರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಬಗ್ಗೆ ಮಾತನಾಡಲು ಕಟೀಲ್ಗೆ ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.
PublicNext
22/10/2021 09:43 pm