ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಭ್ಯರ್ಥಿಗಳು 25 ಸಾವಿರ ಹೆಚ್ಚು ಮತಗಳ ಅಂತರದಿಂದ ಗೆಲುವು : ಆರ್. ಅಶೋಕ್

ಚಿತ್ರದುರ್ಗ : ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಚುನಾವಣಾ ಕಾವು ರಂಗೇರಿದೆ. ಈಗಾಗಲೇ ಮೂರು ಪಕ್ಷಗಳ ಮುಖಂಡರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಬೆಂಗಳೂರಿನಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಉಪಹಾರ ಸೇವಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ದಿನ ದಿನಕ್ಕೂ ಕಾಂಗ್ರೆಸ್ ಪಕ್ಷದ ಪ್ರಭುತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದರು. ಭಾರತೀಯ ಜನತಾ ಪಕ್ಷದವರು ಉಪಚುನಾವಣೆಯಲ್ಲಿ ಹಣ ಹಂಚುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ, ಆದರೆ ಚುನಾವಣೆಯ ನಂತರ ಸೋಲಿಗೆ ಈಗಲೇ ವೇದಿಕೆ ಸಿದ್ಧತೆ ಮಾಡಿಕೊಂಡು ಕಾಂಗ್ರೆಸ್ ಪಕ್ಷ ಒಂದು ರೀತಿಯಲ್ಲಿ ಸೋಲನ್ನು ಒಪ್ಪಿಕೊಂಡಿದೆ ಎನ್ನುವ ಮೂಲಕ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದರು.

ಕಳೆದ ಅಸಂಬ್ಲಿ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏಟು-ಎದುರೇಟು ನೀಡಿದ್ದೇವೆ ಅದನ್ನು ಅವರಿಗೆ ತಡೆದುಕೊಳ್ಳಲಾಗಲಿಲ್ಲ ಎಂದು ವ್ಯಂಗ್ಯವಾಡಿದರು.

Edited By : Shivu K
PublicNext

PublicNext

23/10/2021 12:21 pm

Cinque Terre

43.41 K

Cinque Terre

0

ಸಂಬಂಧಿತ ಸುದ್ದಿ