ಮೈಸೂರು: ರಾಜ್ಯದಲ್ಲಿ ಅಸಂಬ್ಲಿ ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ಇನ್ನು ತಾಲಿಬಾನ್ ಆಡಳಿತ ಹೇಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ತಕ್ಷಣವೇ ಕಳುಹಿಸಿ ಕೊಡಬೇಕಾಗಿದೆ' ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
PublicNext
23/10/2021 01:52 pm