ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್: ಸಮ್ಮಿಶ್ರ ಸರ್ಕಾರ ಇದ್ದಾಗ ನನಗೆ ತುಂಬಾ ನೋವು ಕೊಟ್ಟರು: ಕುಮಾರಸ್ವಾಮಿ

ಹಾನಗಲ್: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಗೆ ಮನುಷ್ಯತ್ವವೇ ಇಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗ ನನಗೆ ತುಂಬಾ ನೋವು ಕೊಟ್ಟರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾನಗಲ್ ಮತದಾರರ ಮುಂದೆ ಅವಲತ್ತುಕೊಂಡಿದ್ದಾರೆ.

ಹಾನಗಲ್‌ನಲ್ಲಿ ಉಪಚುನಾವಣೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ನವರು ಈ ಕ್ಷೇತ್ರಕ್ಕೆ ಏನೂ ಕೊಟ್ಟಿದ್ದಾರೆ..? ಯಾವುದೋ ಒಂದೆರಡು ರಸ್ತೆಗಳನ್ನ ಮಾಡಿದ್ದು ಬಿಟ್ಟರೇ ಏನೂ ಮಾಡಿಲ್ಲ. ಇಷ್ಟು ಮಾಡಿದ್ರೆ ಜನರ ಸಂಕಷ್ಟಗಳು ನಿವಾರಣೆ ಆಗುವುದಿಲ್ಲ. ಇಲ್ಲಿ ಬಂದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕೆಲಸದ ಬಗ್ಗೆ ಒಬ್ಬರಿಗೊಬ್ಬರು ಸವಾಲು ಹಾಕಿಕೊಂಡಿದ್ದಾರೆ. ಇವರಿಗೇನಾದರೂ ಮನುಷ್ಯತ್ವ ಮತ್ತು ತಾಯಿ ಹೃದಯ ಇದೇಯಾ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈಗ ಹಾನಗಲ್‌ನಲ್ಲಿ ಚೀಲದಲ್ಲಿ ಹಣ ತಂದಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಸಾರ್ವಜನಿಕರ ದುಡ್ಡು. ಭ್ರಷ್ಟಾಚಾರ ಬಗ್ಗೆ ಚರ್ಚೆ ಮಾಡಿದ್ರೆ ನಿಮಗೆ ಏನು ಲಾಭ? ಇಲ್ಲಿ ಯಾರು ಸತ್ಯಹರಿಶ್ಚಂದ್ರಗಳು ಏನೂ ಅಲ್ಲ. ಉದಾಸಿಯವರು ನಮ್ಮ ಪಕ್ಷದವರು, ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಪಕ್ಷದ ಸಂಘಟನೆ ಕುಸಿಯುತ್ತಿದೆ.

ಹಾವೇರಿ ಜಿಲ್ಲೆಯ ಪಕ್ಷಕ್ಕೆ ಬೆಂಬಲವಿಲ್ಲ, ಆದ್ರೆ ರೈತರ ಬೆಂಬಲ ನನಗಿದೆ. ಜನತೆ ನನಗೆ ಮತ ಹಾಕದೆ ಇದ್ದರು, ನಾನು ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಏಕೆ ಸಾಲ ಮನ್ನಾ ಮಾಡಲಿಲ್ಲ. ಅವಾಗ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ರಿ ಎಂದ ಕುಮಾರಸ್ವಾಮಿ, ಸಿದ್ದರಾಮಯ್ಯಗೆ ಪ್ರಶ್ನೆ ಮಾಡಿದ್ದಾರೆ.

Edited By : Shivu K
PublicNext

PublicNext

23/10/2021 04:44 pm

Cinque Terre

54.41 K

Cinque Terre

10

ಸಂಬಂಧಿತ ಸುದ್ದಿ