ಶ್ರೀನಗರ : ಕಣಿವೆ ರಾಜ್ಯದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ 3 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲಿರುವ ಅವರು ಇದಕ್ಕೂ ಮೊದಲು ಅಮಿತ್ ಶಾ, ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಪೊಲೀಸ್ ಇನ್ಸ್ ಪೆಕ್ಟರ್ ಪರ್ವೇಜ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಪರ್ವೇಜ್ ಪತ್ನಿ ಫಾತಿಮಾ ಅಕ್ತರ್ ಗೆ ಸರ್ಕಾರಿ ಉದ್ಯೋಗದ ದಾಖಲೆ ಪತ್ರಗಳನ್ನು ನೀಡಿದರು. ಇನ್ನು 3 ದಿನಗಳ ಪ್ರವಾಸದಲ್ಲಿ ಅಮಿತ್ ಶಾ, ಶ್ರೀಗನರ ಹಾಗೂ ಶಾರ್ಜಾ ನಡುವಿನ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲ ದಿನಗಳಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಗಳನ್ನು ಹತ್ತಿಕ್ಕಿಲು ಈ ಭೇಟಿ ಮಹತ್ವದ್ದಾಗಿದೆ.
PublicNext
23/10/2021 05:29 pm