ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಲಿಷ್ಠ ಸರ್ಕಾರ ಇದ್ದರೂ ಹಾನಗಲ್ ನಲ್ಲಿ ಮುಖ್ಯಮಂತ್ರಿಗಳು ಬೀಡು ಬಿಟ್ಟಿದ್ದು ಹಾಸ್ಯಾಸ್ಪದ

ಹುಬ್ಬಳ್ಳಿ : ಬಹಳ ಬಲಿಷ್ಠವಾದ ಸರ್ಕಾರ ಇದ್ದರೂ ಹಾನಗಲ್ ನಲ್ಲಿ ಮುಖ್ಯಮಂತ್ರಿಗಳು ಬೀಡು ಬಿಟ್ಟಿದ್ದಾರೆ. ಮಂತ್ರಿಗಳೆಲ್ಲಾ ಬಂದಿದ್ದಾರೆ. ಜೊತೆಗೆ ಚೀಲಗಳನ್ನು ತಂದಿದ್ದಾರೆ. ಇದನ್ನು ನೋಡಿದರೆ ಸೋಲಿನ ಭೀತಿ ಕಾಡುತ್ತಿರುವುದು ಸ್ಪಷ್ಟವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಹಣ ಹಂಚುತ್ತಿರುವ ವಿಚಾರವಾಗಿ ಕಾಂಗ್ರೆಸ್ ಕೇವಲ ಆರೋಪ ಮಾಡುತ್ತಿದ್ದೆಯೇ ಹೊರತು, ಅದಕ್ಕೆ ಸಾಕ್ಷಿ ನೀಡುತ್ತಿಲ್ಲ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಅವರಿಗೆ ವಿಡಿಯೋ ಸಾಕ್ಷಿ ಬಿಡಬೇಕಾ? ಹಾಗಿದ್ದರೆ, ಅವರು ದುಡ್ಡು ಹಂಚುತ್ತಿರುವ ವಿಡಿಯೋ ಮಾಡಿ ಅದನ್ನು ಪ್ರಕಟಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ಹಿಂದೆ ನಾವು ಈ ರೀತಿ ಸಾಕಷ್ಟು ಸಾಕ್ಷಿಗಳನ್ನು ಬಹಿರಂಗಪಡಿಸಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಮತ್ತೊಮ್ಮೆ ಬಹಿರಂಗ ಮಾಡುತ್ತೇವೆ. ಅದು ದೊಡ್ಡ ವಿಚಾರವಲ್ಲ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಚಾರ ಏನೆಂದರೆ, ಈ ಹಿಂದೆ ಬಿಜೆಪಿ ನಾಯಕರು ಜನರಿಗೆ ಕೊಟ್ಟಿದ್ದ ಮಾತು ಏನು? ಅಧಿಕಾರಕ್ಕೆ ಬಂದ ನಂತರ ಅವರು ಉಳಿಸಿಕೊಂಡಿದ್ದಾರಾ? ಇಲ್ಲವಾ? ಎಂಬುದಷ್ಟೇ. ಕೋವಿಡ್ ಸಂದರ್ಭದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡರಾ? ಡಬಲ್ ಇಂಜಿನ್ ಸರ್ಕಾರ ಕೊಡಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು. ಈಗ ಎಲ್ಲ ರೈತರ ಆದಾಯ ಡಬಲ್ ಆಗಿದೆಯಾ, ಬದಲಿಗೆ ರಸಗೊಬ್ಬರ ಬೆಲೆ ಏರಿಕೆ ಹಾಗೂ ಮಾರುಕಟ್ಟೆ ಇಲ್ಲದೇ ಅವರ ಜೀವನ ದುಸ್ಥಿತಿಗೆ ಸಾಗಿದೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ? ಜನ ಅವರಿಗೆ ಮತ ಯಾಕೆ ನೀಡಬೇಕು?’ ಎಂದು ಪ್ರಶ್ನಿಸಿದರು.

Edited By : Manjunath H D
PublicNext

PublicNext

23/10/2021 05:57 pm

Cinque Terre

48.18 K

Cinque Terre

2

ಸಂಬಂಧಿತ ಸುದ್ದಿ