ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂಬ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ಎಲ್ಲಾ ಮುಖಂಡರು ಅಲ್ಲೇ ಇದ್ದು, ಪ್ರಚಾರ ನಡೆಸುತ್ತಿದ್ದಾರೆ. ದೊಡ್ಡ ದೊಡ್ಡ ಸಭೆಗಳು ಈಗಾಗಲೇ ನಡೆದಿವೆ. ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿರೋಧ ಪಕ್ಷದವರು ಅಪಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಕವಡೆ ಕಾಸಿನ ಬೆಲೆ ಇರೋದಿಲ್ಲ. ಚುನಾವಣೆ ವೇಳೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡುವುದು ಸ್ವಾಭಾವಿಕ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೇ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು.
ಬುರುಡೆ ಸರ್ಕಾರ ಎಂಬ ಸಿದ್ದರಾಮಯ್ಯರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಸಿದ್ದರಾಮಯ್ಯನವರು ಏನು ಬೇಕಾದರೂ ಮಾತನಾಡಬಹುದು. ಚುನಾವಣೆಯ ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.
PublicNext
24/10/2021 12:47 pm