ಚಿತ್ರದುರ್ಗ : 2023 ರ ವಿಧಾನಸಭಾ ಚುನಾವಣೆ ಹದಿನೈದು ತಿಂಗಳು ಬಾಕಿ ಇರುವಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಚುನಾವಣೆಯ ಸಿದ್ಧತೆ ಜೋರಾಗಿದೆ. ಜಿಲ್ಲೆಯ ಎಸ್.ಟಿ. ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಪ್ರಕಾಶ್ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕ್ಷೇತ್ರ ಅಂತಿಮವಾಗಿಲ್ಲ,ಈ ಕುರಿತು ಶೀಘ್ರವೇ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ತಿಳಿಸಲಾಗುವುದು ಎಂದರು. ಕಳೆದ ಬಾರಿ ಯಾಕೆ ಸ್ಪರ್ಧಿಸಲಿಲ್ಲ ಎನ್ನುವ ಪ್ರಶ್ನೆಗೆ ಟಿಕೆಟ್ ಸಿಗದ ಕಾರಣ ಹೊಸದುರ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ, ಈ ಬಾರಿ ಜಿಲ್ಲೆಯ ಎಸ್.ಟಿ ಮೀಸಲು ಕ್ಷೇತ್ರದಿಂದ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದರು. ನಾನು ಸಂಸದನಾಗಿದ್ದಾಗ ಕೇವಲ 2 ಕೋಟಿ ಮಾತ್ರ ಅನುದಾನ ಬರುತ್ತಿತ್ತು ಅದರಲ್ಲಿ ಜನರು ಗುರುತಿಸುವ ಕೆಲಸಗಳನ್ನು ಮಾಡಿದ್ದೇನೆ. ಬಂದ ಅನುದಾನದಲ್ಲಿ ಕ್ಷೇತ್ರದ ಜನರು ಹೇಳಿದ ಹಾಗೆ ಕೆಲಸ ಮಾಡಲಾಗಿದೆ ಎಂದು ನಟ ಶಶಿಕುಮಾರ್ ತಿಳಿಸಿದರು.
PublicNext
25/10/2021 06:26 pm