ಹಾಸನ : ನಿರಂತರವಾಗಿ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಬಡಜನರ ಸಂಕಷ್ಟ ಹೆಚ್ಚಾಗುತ್ತಿದೆ. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಬಡವರ ಬವಣೆ ನೀಗಿಸುವತ್ತ ಗಮನಹರಿಸಬೇಕು. ಮತ್ತು ಬೆಲೆ ಏರಿಕೆ ನಿಯಂತ್ರಿಸಲು ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವೈಯಕ್ತಿಕ ನಿಂದನೆ ಮಾಡುವ ಮೂಲಕ ನಾನು ರಾಜಕಾರಣ ಮಾಡುವುದಿಲ್ಲ ಸರಿಯಲ್ಲ. ಅಂತವರ ಬಗ್ಗೆ ಮಾತನಾಡುವುದಿಲ್ಲ ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ವೈಯಕ್ತಿಕ ನಿಂದನೆಗಳನ್ನು ಮಾಡುವ ಮೂಲಕ ಇಂದಿನ ರಾಜಕೀಯ ವ್ಯವಸ್ಥೆ ತಳಮಟ್ಟಕ್ಕೆ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲ ಇತರೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಸಾಗಾಣಿಕೆ ವೆಚ್ಚ ಸೇರಿ ತರಕಾರಿ ಸೇರಿದಂತೆ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು.
PublicNext
25/10/2021 10:43 pm