ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಜಮೀರ್ ಅಹ್ಮದ್

ಹುಬ್ಬಳ್ಳಿ: ಜಾಫರ್ ಶರೀಫರನ್ನ ರಾಜಕೀಯದಲ್ಲಿ ಮೇಲೆಳದಂತೆ ಮಾಡಿದ್ದು ಕುಮಾರಸ್ವಾಮಿ, ಗೆಲ್ಲುವ ಸಮಯದಲ್ಲಿ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರು ಏಕೆ ನೆನಪಾಗಲ್ಲ, ಕೇವಲ ಅಲ್ಪಸಂಖ್ಯಾತರಿಗೆ ಅಷ್ಟೇ ಅಲ್ಲ, ಮೋಸ ಮಾಡಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು, ಯಡಿಯೂರಪ್ಪನವರಿಗೆ ಅಧಿಕಾರ ಕೊಡಿ ಎಂದು ನಾನು ಕುಮಾರಸ್ವಾಮಿಗೆ ಹೇಳಿದ್ದೆ, ಹೆಚ್.ಡಿ.ರೇವಣ್ಣ ಎಲ್ಲಿ ಉಪ ಮುಖ್ಯಮಂತ್ರಿ ಆಗ್ತಾರೆಂದು ಯಡಿಯೂರಪ್ಪನವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ, ಇದರ ಬಗ್ಗೆ ನನ್ನ ಬಳಿ ವಿಡಿಯೋ ದಾಖಲೆ ಇದೆ.ಕುಮಾರಸ್ವಾಮಿ ಸ್ವಂತ ಸಹೋದರನ ಏಳಿಗೆಯನ್ನ ಸಹಿಸಿಕೊಳ್ಳುವುದಿಲ್ಲ, ನಮ್ಮ ಏಳಿಗೆಯನ್ನ ಅವರು ಸಹಿಸಿಕೊಳ್ಳುವುದು ದೂರಿದ ಮಾತು ವಾಗ್ವಾದ ನಡಸಿದರು.

ಸೋಲುವ ಸಮಯದಲ್ಲಿ ಕುರಿ ಬಲಿ ಕೊಟ್ಟ ಹಾಗೆ, ಅಲ್ಪಸಂಖ್ಯಾತರನ್ನ ಬಲಿ ಕೋಡ್ತಾರೆ ಈ ಕುಮಾರಸ್ವಾಮಿ,

ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಒಳ್ಳೆಯ ಯೋಜನೆಗಳನ್ನು ನೀಡಿದ್ದಾರೆ, ಹಲವು ಭಾಗ್ಯಗಳನ್ನು ನೀಡಿದ್ದಾರೆ. ಕುಮಾರಸ್ವಾಮಿ ಅಲ್ಪಸಂಖ್ಯಾತರಿಗೆ ಏನೂ ನೀಡಲಿಲ್ಲ, ಅದಕ್ಕೆ ನಾನು ಜೆಡಿಎಸ್ ಬಿಟ್ಟು ಬಂದಿದ್ದು. ನನ್ನ ರಾಜಕೀಯ ಗುರುಗಳು ದೇವೇಗೌಡ್ರ ಮತ್ತು ಸಿದ್ದರಾಮಯ್ಯ, ದೇವೇಗೌಡ್ರು 100% ಸೆಕ್ಯೂಲರ್ ರಾಜಕಾರಣಿ, ಜಯನಗರ ಬೈ ಎಲೆಕ್ಷನ್‌ನಲ್ಲಿ ಕುಮಾರಸ್ವಾಮಿ ಜನರಿಗೆ ಯಾರು ಅಂತಾನೇ ಗೋತ್ತೆ ಇರಲಿಲ್ಲ, ನಾನೇ ಮಾಜಿ ಪ್ರಧಾನ ಮಂತ್ರಿ ಮಗ ಅಂತ ಪರಿಚಯ ಮಾಡಿಕೊಟ್ಟಿದ್ದು,

2004 ರಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಉಪಚುನಾವಣೆಯಲ್ಲಿ ಸೂಟ್‌ಕೇಸ್ ರಾಜಕಾರಣ ಮಾಡಿದ್ದಾರೆ, ನಾನು ಬಸ್ ಮಾಲೀಕ, ನಮ್ಮ ಅಜ್ಜನ ಕಾಲದಿಂದಲೂ ನಾವು ಮಾಲೀಕರು, ನಾನು ಯಾವತ್ತೂ ನಮ್ಮ ಬಸ್ ಕ್ಲೀನ್ ಮಾಡಿಲ್ಲ, ಅವರಿಗೆ ಎಲ್ಲಿಯೂ ಕುಳಿತುಕೊಳ್ಳಲು ಜಾಗ ಇರಲಿಲ್ಲ, ನಮ್ಮ ಕಚೇರಿಯಲ್ಲಿ ನಾಲ್ಕು ಗಂಟೆಗಳ ಕಾಲ ಬಂದು ಕುಳಿತುಕೊಳ್ಳುತ್ತಿದ್ದರು,ಕುಮಾರಸ್ವಾಮಿಯವರನ್ನ ನಾನೇ ಸಾಕಿದ್ದೇನೆ, ಅವರಿಗೆ ಜಾಗ ಕೊಟ್ಟಿದ್ದೇನೆ, ಅವರ ಹಾಗೆ ನಾನು ಬಿಬಿಎಂಪಿಯಲ್ಲಿ ಕಸ ಗೂಡಿಸಿಲ್ಲ,ಅವರ ಬಗ್ಗೆ ಹೇಳೀದಕ್ಕೆ ಇನ್ನೂ ಬಹಳಷ್ಟು ಇದೆ ಎಂದು ಗರಂ ಆದರು.

ಸುಮ್ಮನೆ ನನ್ನ ಕೆಣಕಬೇಡಿ ಕುಮಾರಸ್ವಾಮಿಯವರೇ, ನಿಮ್ಮ ಕೆಲಸ ನೀವು ಮಾಡಿ ನನ್ನ ಕೆಲಸ ನಾನು ಮಾಡ್ತೀನಿ, ನಾನು ಬಾಯಿ ಮುಚ್ಚಿಕೊಂಡು ಕುಳಿತಿದ್ದೆ, ಅವರು ನನ್ನ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಅವರ ಬಗ್ಗೆ ಈಗ ಹೇಳುತ್ತಿದ್ದೇನೆ, ಕುಮಾರಸ್ವಾಮಿ ವಿರುದ್ಧ ಜಮೀರ್ ವಾಗ್ದಾಳಿಕ್ಕಿಳದಿದ್ದಾರೆ. ಮುಂದಿನ 2023 ಕ್ಕೆ ನಮ್ಮ ಸರ್ಕಾರ ಬರುತ್ತೆ, 2024 ಕ್ಕೆ ರಾಹುಲ್‌ ಗಾಂಧಿ ಅವರು ಪ್ರಧಾನಿ ಆಗುತ್ತಾರೆ ಎಂದು ಜಮೀರ್ ಅಹಮ್ಮದ್ ಹೇಳಿದರು.

Edited By : Manjunath H D
PublicNext

PublicNext

26/10/2021 12:01 pm

Cinque Terre

39.51 K

Cinque Terre

3

ಸಂಬಂಧಿತ ಸುದ್ದಿ