ನವದೆಹಲಿ: ಭಾರತೀಯ ಜನತಾ ಪಾರ್ಟಿ ಹಾಗೂ ಆರ್.ಆರ್.ಎಸ್.ವಿರುದ್ಧ ಹೋರಾಡಲು ನಮ್ಮಲ್ಲಿ ಏಕತೆ ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಸೋನಿಯಾ ಗಾಂಧಿ ಸದ್ಯ ಎಲ್ಲವನ್ನೂ ಗಮನಿಸುತ್ತಿದ್ದಾರೆ. ತಮ್ಮ ಪಕ್ಷದಲ್ಲಿಯ ಸ್ಥಿರತೆ ಕಾಪಾಡುವ ಪ್ರಯತ್ನದಲ್ಲಿಯೇ ಇದ್ದಾರೆ. ಈ ಹಿನ್ನೆಯಲ್ಲಿಯೇ ಇಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳ,ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದಾರೆ.
ಇಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಆರ್.ಎಸ್.ಎಸ್. ವಿರುದ್ಧ ಹೋರಾಡಲು ಪಕ್ಷದಲ್ಲಿ ಏಕತೆ ಮತ್ತು ಶಿಸ್ತು ಅವಶ್ಯ ಇದೆ. ಬಿಜೆಪಿ ಮತ್ತು ಆರ್.ಎಸ್.ಎಸ್ ಕುಟೀಲ ನೀತಿ ವಿರುದ್ಧ ನಾವು ಸೈದ್ಧಾಂತಿಕವಾಗಿಯೇ ಹೋರಾಡಬೇಕಿದೆ.ಅವರು ಹೇಳೋದನ್ನ ನಾವು ಸುಳ್ಳು ಅಂತ ದೃಢವಾಗಿಯೇ ಹೇಳಬೇಕಿದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.
PublicNext
26/10/2021 02:52 pm