ಬೆಂಗಳೂರು: ದಿನ ಬಳಕೆ ವಸ್ತು, ಪದಾರ್ಥಗಳು, ಇಂಧನ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಿದ್ದರೂ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರು, ಎಲ್ಲಿದೆ ಬೆಲೆ ಏರಿಕೆ ಎಂದು ಪ್ರಶ್ನಿಸಿದ್ದಾರೆ.
ಹೌದು. ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಬೆಲೆ ಏರಿಕೆ ಕುರಿತ ಪ್ರಶ್ನೆಗೆ ಸಿಟ್ಟಿನಿಂದ ಪ್ರತಿಕ್ರಿಯಿಸಿದ ಅವರು, 'ಎಲ್ಲಿದೆ ಬೆಲೆ ಏರಿಕೆ? ಜನರು ಪ್ರಶ್ನಿಸುತ್ತಿಲ್ಲ. ನೀವು ಮಾತ್ರ ಪ್ರಶ್ನಿಸುತ್ತಿದ್ದೀರಿ. ಬೆಲೆ ಏರಿಕೆ ಕುರಿತು ಜನರಿಗೆ ಆಕ್ರೋಶವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಆಕ್ರೋಶವಿದೆ ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನರಿಗೆ ಸಮಸ್ಯೆಯಾಗಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಅವಧಿಗಿಂತಲೂ ಈಗ ಜನರು ನೆಮ್ಮದಿಯಿಂದ ಇದ್ದಾರೆ. ಕಾಂಗ್ರೆಸ್ ಪಕ್ಷದವರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಪೆಟ್ರೋಲಿಯಂ ಉತ್ಪನ್ನ ಖರೀದಿಗೆ ಮಾಡಿದ್ದ ಸಾಲವನ್ನು ಈಗಿನ ಸರ್ಕಾರ ತೀರಿಸುತ್ತಿದೆ. ಹೀಗಾಗಿ ದರ ಹೆಚ್ಚಳ ಮಾಡಲಾಗುತ್ತಿದೆ ಎಂದು ತಿಳಿಸಿದರು. ಆದರೆ ಎಷ್ಟು ಸಾಲ ತೀರಿಸಲಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, 'ಈ ಬಗ್ಗೆ ಮಾಹಿತಿ ಇಲ್ಲ. ಪೆಟ್ರೋಲಿಯಂ ಸಚಿವಾಲಯ ತಮ್ಮ ವ್ಯಾಪ್ತಿಯಲ್ಲಿಲ್ಲ' ಎಂಬ ಹಾರಿಕೆ ಉತ್ತರ ನೀಡಿದರು.
PublicNext
27/10/2021 03:09 pm