ಬೆಂಗಳೂರು : ಬೈ ಎಲೆಕ್ಷನ್ ಭರಾಟೆಯಲ್ಲಿ ರಾಜಕೀಯ ನಾಯಕರುಗಳು ನಾಲಿಗೆ ಹರಿಬಿಡುವ ಪ್ರಮಾದ ಮುಂದುವರೆದಿದೆ.ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಟಿ ರವಿ, "ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ. ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ?" ಎಂದು ಪ್ರಶ್ನಿಸಿದ್ದಾರೆ.
ಸಿಂದಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಬೇಕು. ಎಂದಾದರೂ ನೀವು ಕುರಿ ಕಾದಿದ್ದೀರಾ?" ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ್ದರು.
PublicNext
28/10/2021 01:21 pm