ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಿಂದಗಿ, ಹಾನಗಲ್​​ ಕ್ಷೇತ್ರದಲ್ಲಿ ಮತದಾನ ಆರಂಭ; ನ.2 ರಂದು ಫಲಿತಾಂಶ

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳಿಗೆ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯುತ್ತಿದೆ. 3 ಲೋಕಸಭಾ ಕ್ಷೇತ್ರಗಳು, 29 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ.

ಬೆಳ್ಳಂಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲಿಸುತ್ತಾ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ನವೆಂಬರ್ 2ರಂದು ಫಲಿತಾಂಶ ಹೊರಬೀಳಲಿದೆ.

ಸಿ.ಎಂ. ಉದಾಸಿ ನಿಧನದಿಂದ ತೆರವಾದ ಹಾನಗಲ್ ಮತ್ತು ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ.

Edited By : Vijay Kumar
PublicNext

PublicNext

30/10/2021 08:23 am

Cinque Terre

37.19 K

Cinque Terre

0

ಸಂಬಂಧಿತ ಸುದ್ದಿ