ಹಾನಗಲ್: ಹಾನಗಲ್ ವಿಧಾನಸಭಾ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 7 ರಿಂದ ಆರಂಭಗೊಂಡಿದ್ದು, ಸಂಜೆ 7 ರ ವರೆಗೆ ಮತದಾನ ನಡೆಯಲಿದೆ.
263 ಮತಗಟ್ಟೆ ಸ್ಥಾಪನೆ ಮಾಡಿದ್ದು, 1155 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸುಗಮ ಹಾಗೂ ಶಾಂತಿಯುತ ಮತದಾನಕ್ಕೆ ಹಾವೇರಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿದೆ.
ಕ್ಷೇತ್ರದ ವ್ಯಾಪ್ತಿಯಲ್ಲಿ ಸುಗಮ ಮತದಾನಕ್ಕಾಗಿ 239 ಮೂಲ ಹಾಗೂ 24 ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ ಮಾಡಿದ್ದು, ಪ್ರತಿ ಮತಗಟ್ಟೆಗಳಲ್ಲಿ ರ‌್ಯಾಂಪ್, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ತಲಾ 263 ಬಿಯು, ಸಿಯು ಹಾಗೂ ವಿವಿಪ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ. ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ನಾಲ್ಕು ಜನರನ್ನು ನೇಮಕ ಮಾಡಲಾಗಿದೆ.
ಒಟ್ಟಾರೆ 263 ಮತಗಟ್ಟೆಗಳಿಗೆ 1155 ಸಿಬ್ಬಂದಿಗಳು ಚುನಾವಣೆಯ ಕರ್ತವ್ಯದಲ್ಲಿ ಭಾಗಿಯಾಗಿದ್ದಾರೆ. ಕ್ಷೇತ್ರದಲ್ಲಿ 1,05,525 ಪುರುಷ ಹಾಗೂ 98,953 ಮಹಿಳೆಯರು ಹಾಗೂ ಮೂರು ಜನ ಇತರ ಮತದಾರರಿದ್ದಾರೆ. ಒಟ್ಟು 2,04,481 ಮತದಾರರು ತಮ್ಮ ಹಕ್ಕನ್ನ ಚಲಾಯಿಸಿಲಿದ್ದಾರೆ.
PublicNext
30/10/2021 09:53 am