ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದ ಬಡವರ ಪಾಲಿನ ನಿಜ ದೇವತೆ. ದೇಶ ಕಂಡ ಮಹಾನ್ ಧೀಮಂತ ನಾಯಕಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಣಗಾನ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ಪಟೇಲ್ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿರಾ ಗಾಂಧಿ 16 ವರ್ಷಗಳ ಕಾಲ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬಾಲ್ಯದಿಂದ ಅಪಾರ ದೇಶ ಭಕ್ತಿ ಬೆಳೆಸಿಕೊಂಡಿದ್ದ ಅವರು ಸ್ವಾತಂತ್ರ್ಯ ಹೋರಾಟಗಾರರ ಜತೆಯಲ್ಲೇ ಬೆಳೆದಿದ್ದರು. ದೇಶದ ಪ್ರಧಾನಿಯಾಗಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಬಹಳ ವಿರೋಧ ಎದುರಿಸಿದ್ದರು ಎಂದ ಸಿದ್ದರಾಮಯ್ಯ, ಇಂದಿರಾ ಗಾಂಧಿ ನಡೆದು ಬಂದ ದಾರಿಯನ್ನು ನೆನಪಿಸಿಕೊಂಡಿದ್ದಾರೆ.
PublicNext
31/10/2021 06:36 pm