ರಾಜ್ಯಾದ್ಯಂತ 66 ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ಕರುನಾಡು ಇದ್ದರೆ, ಕಲಬುರಗಿಯಲ್ಲಿ ಮಾತ್ರ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿರುವ ಮಂದಿಯನ್ನು ಮಾರ್ಗ ಮಧ್ಯೆ ಕೋರ್ಟ್ ಸರ್ಕಲ್ ಬಳಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ತಡೆದು, ಎಮ್‌ಎಸ್ ಪಾಟೀಲ್ ಸೇರಿದಂತೆ ಹದಿನೈದಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿದ್ದಾರೆ.
ಎಮ್‌ಎಸ್ ಪಾಟೀಲ್, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಅಧ್ಯಕ್ಷರಾಗಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ಬಾವುಟ ಹಾರಿಸಿರುವುದಾಗಿ ತಿಳಿಸಿದ್ದಾರೆ.ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟೇಲ್ ವೃತ್ತ ಸೇರಿದಂತೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
PublicNext
01/11/2021 09:35 am