ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭ ಸುಗಮ ಸಂಗೀತ ಕ್ಷೇತ್ರವನ್ನು ಕಡೆಗಣಿಸಲಾಗಿದೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್ ಎಲ್ಲರಿಗೂ ನ್ಯಾಯ ಕೊಡಲು ಆಗಿಲ್ಲ ಅನ್ನೋದನ್ನು ಒಪ್ಪಿಕೊಳ್ಳುತ್ತೇನೆ.
ಸೀಮಿತವಾದ ಅವಕಾಶದಲ್ಲಿ 66 ಜನ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು, ಈ ಬಾರಿ ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗಿಲ್ಲ ಎಂದು ವಿಶ್ವಾಸದಿಂದ ಹೇಳಬಲ್ಲೆ.ಈ ಬಾರಿ ಪ್ರಶಸ್ತಿ ಸಾಧಕರನ್ನು ಹುಡುಕಿಕೊಂಡು ಬಂದಿದೆ.ಒಂದೇ ಬಾರಿ ಎಲ್ಲರನ್ನೂ ಆಯ್ಕೆ ಮಾಡುವುದು ಕಷ್ಟಸಾಧ್ಯ.ಮುಂದಿನ ವರ್ಷ ಇನ್ನಷ್ಟು ಒಳ್ಳೆಯ ಸಾಧಕರನ್ನು ಗುರುತಿಸುತ್ತೇವೆ.ಸಣ್ಣಪುಟ್ಟ ನಿಯಮಾವಳಿಗಳ ಬದಲಾವಣೆಯಾಗಬೇಕು ಅನಿಸುತ್ತಿದೆ .ಸಿಎಂ ಜೊತೆ ಚರ್ಚಿಸಿ ನಿಯಮಾವಳಿಗಳಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
PublicNext
01/11/2021 12:08 pm